ದೈಹಿಕ, ಮಾನಸಿಕ ಸದೃಢತೆಗೆ ಯೋಗ ಸಹಕಾರಿ: ಶಾಸಕ ಯತ್ನಾಳ

66

ಪ್ರಜಾಸ್ತ್ರ ಸುದ್ದಿ

ವಿಜಯಪುರ: ದೈನಂದಿನ ಜೀವನದಲ್ಲಿ ಯೋಗ ಅಳವಡಿಸಿಕೊಳ್ಳಬೇಕು ಎಂದು ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕರೆ ನೀಡಿದರು. ಆಯುಷ್ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಇವರ ಸಹಯೋಗದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜೂನ್ 21ರಂದು ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ನಡೆದ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಸಸಿಗೆ ನೀರುಣಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.

ದೈಹಿಕ, ಮಾನಸಿಕ ಸದೃಢತೆಗೆ ಯೋಗ ಸಹಕಾರಿ. ಜೀವನದಲ್ಲಿ ಪ್ರತಿನಿತ್ಯ ಯೋಗ ರೂಡಿಸಿಕೊಳ್ಳಬೇಕು. ನಿಯಮಿತ ಯೋಗ ಮಾಡುವುದರ ಮೂಲಕ ಆರೋಗ್ಯ ದೃಢತೆ ಹಾಗೂ ಚೈತನ್ಯಯುಕ್ತ ಬದುಕು ನಡೆಸಬಹುದಾಗಿದೆ ಎಂದರು.

ಸಾಮೂಹಿಕ ಯೋಗಾಭ್ಯಾಸ:

ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯೋಗಾಸಕ್ತರಿಗೆ 45 ನಿಮಿಗಳ ಕಾಲ ಯೋಗಾಭ್ಯಾಸ ಮಾಡಿಸಲಾಯಿತು. ಸುನೀತಾ ಬಿರಾದಾರ ಅವರು ಯೋಗಾಸನ ಹಾಗೂ ಚಂದ್ರಶೇಖರ ಮತ್ತು ಪತಂಜಲಿ ಯೋಗ ಸಮಿತಿಯ ಯೋಗ ಶಿಕ್ಷಕಿ ಗೀತಾಂಜಲಿ ದಾಸರ್ ಅವರು ಪ್ರಾಣಾಯಾಮದ ಅಭ್ಯಾಸ ಮಾಡಿಸಿದರು. 

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ,  ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿ ಡಾ.ರಾಮನಗೌಡ ಎಸ್. ಪಾಟೀಲ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲಿಕ್ ಮಾನವರ ಸೇರಿದಂತೆ ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾನಿಲಯ, ಕರ್ನಾಟಕ ರಿಸರ್ವ ಬಟಾಲಿಯನ್, ಸ್ಕೌಟ್ಸ್ ಹಾಗೂ ಗೈಡ್ಸ್, ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಭಾರತಿ ಕುಂದನಗಾರ ತಂಡದಿಂದ ನಾಡಗೀತೆ ಪ್ರಸ್ತುತಪಡಿಸಲಾಯಿತು.   ವೈದ್ಯಾಧಿಕಾರಿ ಡಾ. ವಿದ್ಯಾವತಿ. ಎಂ. ಅಥಣಿ ಪ್ರಾರ್ಥನೆ ಗೀತೆ ಹಾಡಿದರು. ಡಾ. ಬಿ.ಎನ್. ವಗದರ್ಣಿ ಸ್ವಾಗತಿಸಿದರು. ಡಾ. ವಿಜಯ ಮಹಾಂತೇಶ ನಿರೂಪಿಸಿದರು.




error: Content is protected !!