ರಾಜ್ಯದ ವಿವಿಧಡೆ ಎರಡು ದಿನ ಮಳೆ

237

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಂಗಳೂರು, ತುಮಕೂರು, ಕೋಲಾರ, ಹಾಸನ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾನುವಾರ ಮಳೆಯಾಗಿದೆ. ಸೋಮವಾರ ಹಾಗೂ ಮಂಗಳವಾರ ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗುತ್ತಿದೆ.




error: Content is protected !!