3 ಡಿಸಿಎಂ ವಿಚಾರ, ಕೈ ನಾಯಕರು ಏನ್ ಹೇಳ್ತಿದ್ದಾರೆ?

59

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಮೂರು ಡಿಸಿಎಂಗಳನ್ನು ಮಾಡಬೇಕು ಎನ್ನುವ ಅಭಿಪ್ರಾಯ ಕೈ ನಾಯಕರಿಂದಲೇ ಕೇಳಿ ಬರುತ್ತಿದೆ. ಇದಕ್ಕೆ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆಗಳನ್ನು ಕೊಡುತ್ತಿದ್ದಾರೆ.

ಸಚಿವರಾದ ಎನ್.ರಾಜಣ್ಣ, ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ ತಮ್ಮ ತಮ್ಮ ಅಭಿಪ್ರಾಯಗಳನ್ನು ಹೇಳಿದ್ದಾರೆ. ಈಗ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್, ಪೌರಾಡಳಿತ ಸಚಿವ ರಹೀಂ ಖಾನ್ ಸಹ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಅಂತಿಮ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದು ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಹಿಂದುಳಿದ, ದಲಿತ, ಅಲ್ಪಸಂಖ್ಯಾತ ಸಮುದಾಯ ಪ್ರತಿನಿಧಿಸುವ ನಾಯಕರಿಗೆ ಡಿಸಿಎಂ ಸ್ಥಾನ ಕೊಡುವುದರಿಂದ ಜನರ ಮೇಲೆಯೂ ಇದು ಪರಿಣಾಮ ಬೀರಿ ಪಕ್ಷದ ಕಡೆ ಒಲವು ಹೆಚ್ಚಾಗುತ್ತೆ. ಬಿಜೆಪಿ ಬೇರೆ ರಾಜ್ಯಗಳಲ್ಲಿ ಈ ಪ್ರಯೋಗ ಮಾಡಿದೆ ಎಂದು ಸಚಿವ ಎನ್.ರಾಜಣ್ಣ ಹೇಳಿದ್ದಾರೆ.

ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಯಿಂದ ಎಲ್ಲವೂ ಆಗುತ್ತದೆ ಎಂದಾದರೆ ಮುಖ್ಯಮಂತ್ರಿಯನ್ನು ಬಿಟ್ಟು ಸಚಿವ ಸಂಪುಟದ ಎಲ್ಲರನ್ನು ಉಪ ಮುಖ್ಯಮಂತ್ರಿ ಮಾಡಲಿ. ಹಾಗೇ ಮಾಡಲು ಆಗುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷೆಗಿಂತ ಕಡಿಮೆ ಸೀಟು ಬಂದಿವೆ. ಅದರ ಬಗ್ಗೆ ಅವಲೋಕನ ಮಾಡಬೇಕು. ಉಪ ಮುಖ್ಯಮಂತ್ರಿ ಹುದ್ದೆ ಕೇಳಲು ಬೇಡವಂದವರು ಯಾರು? ಬೇಕಿದ್ದರೆ ಎಲ್ಲ ಸಮುದಾಯದವರನ್ನು ಉಪ ಮುಖ್ಯಮಂತ್ರಿ ಮಾಡಲಿ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!