ಡಿ.20ರಿಂದ 3 ದಿನ ಅಖಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

91

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯಲಿದ್ದು, ಡಿಸೆಂಬರ್ 20ರಿಂದ ಮೂರು ದಿನಗಳ ಕಾಲ ಸಮ್ಮೇಳನ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ಸಮ್ಮೇಳನ ಸಂಬಂಧ ಈ ಹಿಂದೆ ಪೂರ್ವಭಾವಿ ಸಭೆ ಕರೆಯಲಾಗಿತ್ತು. ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಹಿನ್ನಲೆಯಲ್ಲಿ ಸಮ್ಮೇಳನದ ವಿಚಾರ ಮುಂದೂಡಲಾಗಿತ್ತು ಎಂದರು. ದೇಶ, ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು ಸಹ ಈ ಸಮ್ಮೇಳನಕ್ಕೆ ಬರಬೇಕು. ನೀವೆಲ್ಲ ಸೇರಿ ಯಶಸ್ವಿಗೊಳಿಸಬೇಕು ಎಂದರು.

ಸರ್ಕಾರ, ಜಿಲ್ಲಾಡಳಿತ, ಸಾಹಿತ್ಯ ಪರಿಷತ್ ನೊಂದಿಗೆ ಸೇರಿ ಕಾರ್ಯಕ್ರಮ ನಡೆಸಲಾಗುವುದು. ಎಲ್ಲರೊಂದಿಗೆ ಚರ್ಚೆ ಮಾಡಿ ಸಮ್ಮೇಳನದ ಸರ್ವಾಧ್ಯಕ್ಷರ ಹೆಸರನ್ನು ತಿಳಿಸಲಾಗುವುದು ಎಂದರು. ಈ ವೇಳೆ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಉಪಸ್ಥಿತರಿದ್ದರು.




Leave a Reply

Your email address will not be published. Required fields are marked *

error: Content is protected !!