ಮಾಜಿ ಸಚಿವ ಪ್ರೊ.ಮುಮ್ತಾಜ್ ಅಲಿ ಖಾನ್ ನಿಧನ

226

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ.ಮುಮ್ತಾಜ್ ಅಲಿ ಖಾನ್ ಅವರು ವಯೋಸಹಜ ಕಾಯಿಲೆಯಿಂದ ಸೋಮವಾರ ಮುಂಜಾನೆ ನಿಧನರಾಗಿದ್ದಾರೆ. 94 ವರ್ಷದ ಪ್ರೊ.ಮುಮ್ತಾಜ್ ಅಲಿ ಖಾನ್, ಗಂಗಾನಗರದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

2008ರಲ್ಲಿ ಬಿ.ಎಸ್ ಯಡಿಯೂರಪ್ಪ ಸರ್ಕಾರದಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಕೋವಿಡ್ ನಿಂದಾಗಿ ರಾಜ್ಯದಲ್ಲಿ ಕೆಲ ಮಾರ್ಗಸೂಚಿಗಳನ್ನ ವಿಧಿಸಲಾಗಿದೆ. ಹೀಗಾಗಿ ಇದರಂತೆ ಮೃತರ ಅಂತ್ಯಕ್ರಿಯೆ ನಡೆಯಲಿದೆ.




error: Content is protected !!