ಮೈಸೂರು ವಿವಿ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿಯರ ಸಂಚಾರ ನಿರ್ಬಂಧ ವಾಪಸ್

223

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ, ಇಲ್ಲಿನ ವಿಶ್ವವಿದ್ಯಾಲಯದಲ್ಲಿ ಸಂಜೆ 6.30ರ ನಂತರ ವಿದ್ಯಾರ್ಥಿನಿಯರ ಸಂಚಾರ ನಿರ್ಬಂಧಿಸಿ ಸುತ್ತೋಲೆ ಹೊರಡಿಸಲಾಗಿತ್ತು. ಇದಕ್ಕೆ ಸಾಕಷ್ಟು ವಿರೋಧಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಸುತ್ತೋಲೆ ವಾಪಸ್ ಪಡೆಯಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಹೇಳಿದ್ದಾರೆ.

ವಿಶ್ವವಿದ್ಯಾಲಯಗಳ ಕ್ಯಾಂಪಸ್ ಸಾಮಾನ್ಯವಾಗಿ ದೊಡ್ಡದಾಗಿರುತ್ತವೆ. ಹಾಗಂತ ವಿದ್ಯಾರ್ಥಿನಿಯರು ಓಡಾಡದಂತೆ ನಿರ್ಬಂಧ ಹೇರುವುದು ಸರಿಯಲ್ಲ. ಅವರ ಸ್ವಾತಂತ್ರ್ಯ ಕಿತ್ತುಕೊಳ್ಳುವುದು ಬೇಡ. ಅವರಿಗೆ ರಕ್ಷಣೆ ನೀಡುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಸುರಕ್ಷಿತ ಕ್ಯಾಂಪಸ್ ನಿರ್ಮಾಣ ಮಾಡಬೇಕು. ಹೀಗಾಗಿ ಸುತ್ತೋಲೆ ವಾಪಸ್ ಪಡೆಯುವಂತೆ ಮೈಸೂರು ವಿವಿ ಕುಲಪತಿ ಪ್ರೊ.ಹೇಮಂತ್ ಕುಮಾರಗೆ ತಿಳಿಸಿದ್ದೇನೆ ಎಂದರು.




error: Content is protected !!