ಬೆಂಗಳೂರಿಗೆ ಬರಲು ಟಿಕೆಟ್ ಬುಕ್ ಮಾಡಿದ ಪ್ರಜ್ವಲ್

82

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಹೊತ್ತಿರುವ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಿಂದ ರಾಜ್ಯಕ್ಕೆ ಬರಲು ಟಿಕೆಟ್ ಕಾಯ್ದಿರಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಜರ್ಮನಿಯ ಮ್ಯೂನಿಕ್ ವಿಮಾನ ನಿಲ್ದಾಣದಿಂದ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ ಟಿಕೆಟ್ ಬುಕ್ ಆಗಿದೆ. ಶುಕ್ರವಾರ ರಾತ್ರಿ ಇಲ್ಲಿಗೆ ಬರಲಿದ್ದಾರೆ ಎಂದು ತಿಳಿದು ಬಂದಿದೆ. ಲುಫ್ತಾನ್ಸಾ ಏರ್ ಲೈನ್ಸ್ ವಿಮಾನದಲ್ಲಿ ಪ್ರಜ್ವಲ್ ರೇವಣ್ಣ ಹೆಸರಿನಲ್ಲಿ ಟಿಕೆಟ್ ಬುಕ್ ಆಗಿದೆ.

ಘಟನೆ ನಡೆದು ಒಂದು ತಿಂಗಳ ಬಳಿಕ ಅಂದರೆ ಮೇ 27ರಂದು ವಿಡಿಯೋ ಮೂಲಕ ವಾಪಸ್ ಬರುವ ಬಗ್ಗೆ ಮಾಹಿತಿ ನೀಡಿದ್ದರು. ಮೇ 31ರಂದು ಬೆಳಗ್ಗೆ 10 ಗಂಟೆಗೆ ಎಸ್ಐಟಿ ಮುಂದೆ ಹಾಜರಾಗಿ ತನಿಖೆಗೆ ಸಹಕರಿಸುತ್ತೇನೆ ಎಂದಿದ್ದಾರೆ.




error: Content is protected !!