ರಾಜ್ಯ ಸರ್ಕಾರದ ಮೊದಲ ವಿಕೆಟ್ ಪತನ?

80

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಇಂದು ಸಂಜೆ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ.

ಬುಧವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ನಿವಾಸ ಕಾವೇರಿಗೆ ಸಚಿವರನ್ನು ಕರೆಸಿಕೊಂಡಿದ್ದು, ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಇಂದು ಸುದ್ದಿಗೋಷ್ಠಿ ಕರೆದಿದ್ದು, ರಾಜೀನಾಮೆ ನೀಡುವ ಸಾಧ್ಯತೆಯಿದೆ.




error: Content is protected !!