ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕ?

82

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಳೆದ 2 ಚುನಾವಣೆಗಳಿಗಿಂತ ಉತ್ತಮ ಸಾಧನೆ ಮಾಡಿದೆ. ಅಲ್ಲದೆ ಇಂಡಿಯಾ ಮೈತ್ರಿಕೂಟ ಒಳ್ಳೆಯ ಸಾಧನೆ ಮಾಡಿದ್ದು, ಇದರ ಹಿಂದೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿಯ ಪರಿಶ್ರಮ ಸಹ ಇದ್ದು, ಲೋಕಸಭೆಯ ವಿಪಕ್ಷ ನಾಯಕರಾಗಿ ಅವರನ್ನೇ ಮಾಡಬೇಕು ಎನ್ನುವ ಕೂಗು ಎದ್ದಿದೆ.

ಇಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಹಾಗೂ ಸಂಸದೀಯ ಪಕ್ಷದ ಸಭೆಯಲ್ಲಿ ಈ ವಿಚಾರ ಚರ್ಚೆಗೆ ಬರಲಿದೆಯಂತೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡಿದ್ದಾರೆ. ಖರ್ಗೆ ರಾಜ್ಯಸಭೆಯ ವಿಪಕ್ಷ ನಾಯಕರಾಗಿದ್ದು, ರಾಹುಲ್ ಗಾಂಧಿಯನ್ನು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವುದು ಒಳ್ಳೆಯದು ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿ ಕೇರಳದ ವಯನಾಡು ಹಾಗೂ ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ಗೆದ್ದು ಬಂದಿದ್ದಾರೆ. ಇನ್ನು ಎರಡು ವಾರಗಳಲ್ಲಿ ಎರಡರಲ್ಲಿ ಯಾವುದನ್ನು ಉಳಿಸಿಕೊಂಡು ಯಾವುದಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುವುದು ತಿಳಿಯಲಿದೆ.




error: Content is protected !!