ಹಿರಿಯ ಲೇಖಕಿ ನಾಡೋಜ ಕಮಲಾ ಹಂಪನಾ ಕಣ್ಮರೆ

116

ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ

ಬೆಂಗಳೂರು: ನಾಡಿನ ಖ್ಯಾತ ಹಿರಿಯ ಲೇಖಕಿ, ಸಂಶೋಧಕಿ ನಾಡೋಜ ಕಮಲಾ ಹಂಪನಾ(89) ಅವರು ಶನಿವಾರ ಮುಂಜಾನೆ ನಿಧನರಾಗಿದ್ದಾರೆ. ಹಿರಿಯ ಸಂಶೋಧಕ, ಸಾಹಿತಿಯಾಗಿರುವ ಪತಿ ನಾಗರಾಜ ಹಂಪನಾ, ಒಬ್ಬ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳುತ್ತಿದ್ದರು. ನಗರದ ಅಮೆರಿಕನ್ ಡಾಲರ್ಸ್ ಕಾಲೋನಿಯಲ್ಲಿರುವ ಪುತ್ರಿ ಮನೆಯಲ್ಲಿ ವಾಸವಾಗಿದ್ದರು. ಶುಕ್ರವಾರ ರಾತ್ರಿ ಸುಮಾರು 10 ಗಂಟೆ ವೇಳೆಗೆ ಹೃದಾಯಾಘಾತವಾಗಿದೆ. ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಮೃತಪಟ್ಟಿದ್ದಾರೆ.

ರಾಜಾಜಿನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 10 ಗಂಟೆಯ ಬಳಿಕ ರವೀಂದ್ರ ಕಲಾಕ್ಷೇತ್ರದ ಹಿಂಭಾಗದಲ್ಲಿರುವ ಸಂಸ ಬಯಲು ರಂಗಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

ಸೃಜನ ಹಾಗೂ ಸೃಜನೇತರ ಸಾಹಿತ್ಯ ಕ್ಷೇತ್ರದಲ್ಲಿ 60ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಸಂಶೋಧನಾ ಕ್ಷೇತ್ರ ಬಹುಮುಖ್ಯವಾಗಿದೆ. ಮೂಡಬಿದರೆಯಲ್ಲಿ ನಡೆದ 71ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು. ಹಂಪಿ ನೀಡುವ ನಾಡೋಜ ಪ್ರಶಸ್ತಿ, ರಾಜ್ಯ ಸರ್ಕಾರದ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಸೇರಿ ಹಲವು ಪುರಸ್ಕಾರಗಳು ಸಂದಿವೆ.




error: Content is protected !!