ದೆಹಲಿ ವಿಮಾನ ನಿಲ್ದಾಣದಲ್ಲಿ ಛಾವಣಿ ಕುಸಿತ, ಓರ್ವ ಸಾವು

127

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಶುಕ್ರವಾರ ಮುಂಜಾನೆ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1ರ ನಿರ್ಗಮನ ಗೇಟಿನಲ್ಲಿ ಛಾವಣಿ ಕುಸಿದಿದೆ. ಇದರಿಂದಾಗಿ ಒಬ್ಬರು ಮೃತಪಟ್ಟಿದ್ದು, 7 ಜನರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ವೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಅನೇಕ ಟ್ಯಾಕ್ಸಿಗಳು ಹಾನಿಯಾಗಿವೆ. ಟರ್ಮಿನಲ್ 1ರ ಸಂಚಾರ ನಿರ್ಬಂಧಿಸಲಾಗಿದೆ. ಇಲ್ಲಿಂದ ಹೊರಡುವ, ಬರುವ ವಿಮಾನಿಗಳನ್ನು ಸಧ್ಯಕ್ಕೆ ರದ್ದುಗೊಳಿಸಲಾಗಿದೆ.

ನಿರ್ಗಮನದ ಮುಂಭಾಗದ ಛಾವಣಿಯ ಹಾಗೂ ಸಪೋರ್ಟ್ ಬೀಮಗಳು ಕುಸಿದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ದೆಹಲಿಯ ಹಲವು ಭಾಗಗಳು ಜಲಾವೃತಗೊಂಡಿದ್ದು, ಸಾರ್ವಜನಿಕರು ಪರದಾಡುತ್ತಿದ್ದಾರೆ.




error: Content is protected !!