ಇದು ಬುಲ್ಡೋಜರ್ ನ್ಯಾಯ: ಮಲ್ಲಿಕಾರ್ಜುನ್ ಖರ್ಗೆ

78

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೇಶದಲ್ಲಿ ಇಂದಿನಿಂದ ಮೂರು ಹೊಸ ಅಪರಾಧ ಕಾಯ್ದೆಗಳು ಜಾರಿಗೆ ಬಂದಿವೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಳೆದ ಲೋಕಸಭೆಯಲ್ಲಿ 146 ಸಂಸದರನ್ನು ಅಮಾನತು ಮಾಡಿ ಬಲವಂತದಿಂದ ಈ ಮೂರು ಕಾನೂನುಗಳನ್ನು ಅಂಗೀಕರಿಸಲಾಗಿದೆ. ಇದು ಬುಲ್ಡೋಜರ್ ನ್ಯಾಯ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದಿರುವ ಅವರು, ಈ ಬಾರಿಯ ಚುನಾವಣೆಯಲ್ಲಿ ನೈತಿಕ ಆಘಾತ ಎದುರಿಸಿದ ಬಳಿಕ ಮೋದಿ ಜೀ ಹಾಗೂ ಬಿಜೆಪಿ ಸಂವಿಧಾನ ಗೌರವಿಸುವ ನಾಟಕ ಮಾಡುತ್ತಿದ್ದಾರೆ. ಸಂಸದೀಯ ವ್ಯವಸ್ಥೆಯಲ್ಲಿ ಈ ಬುಲ್ಡೋಜರ್ ನ್ಯಾಯ ಮೇಲುಗೈ ಸಾಧಿಸಲು ಇಂಡಿಯಾ ಕೂಟ ಬಿಡುವುದಿಲ್ಲವೆಂದು ಕಿಡಿ ಕಾರಿದ್ದಾರೆ.

163 ವರ್ಷಗಳ ಹಿಂದಿನ ಭಾರತೀಯ ದಂಡ ಸಂಹಿತೆ, 126 ವರ್ಷಗಳ ಹಿಂದಿನ ಅಪರಾಧ ದಂಡಪ್ರಕ್ರಿಯಾ ಸಂಹಿತೆ ಹಾಗೂ 151 ವರ್ಷಗಳ ಹಿಂದಿನ ಭಾರತೀಯ ಸಾಕ್ಷ್ಯ ಕಾಯ್ದೆಯ ಬದಲಿಗೆ ಮೂರು ಹೊಸ ಕಾನೂನುಗಳನ್ನು ಜುಲೈ 1ರಿಂದ ಜಾರಿಗೆ ಬಂದಿವೆ.




error: Content is protected !!