ಹೆಲಿಕಾಪ್ಟರ್ ದುರಂತ: ಏರ್ ಮಾರ್ಷಲ್ ಮಾನವೇಂದ್ರ ಸಿಂಗ್ ನೇತೃತ್ವದಲ್ಲಿ ತನಿಖೆ

229

ಪ್ರಜಾಸ್ತ್ರ ಸುದ್ದಿ

ನವದೆಹಲಿ: ತಮಿಳುನಾಡಿನ ನೀಲಗಿರ ಬೆಟ್ಟದಲ್ಲಿ ಸೇನಾ ಹೆಲಿಕಾಕ್ಟಪರ್ ಪತನದಲ್ಲಿ ಸಿಡಿಎಸ್ ಬಿಪಿನ್ ರಾವತ್ ಸೇರಿದಂತೆ 13 ಜನರು ಮಡಿದಿದ್ದಾರೆ. ಇದರ ತನಿಖೆ ಏರ್ ಮಾರ್ಷಲ್ ಮಾನವೇಂದ್ರ ಸಿಂಗ್ ನೇತೃತ್ವದಲ್ಲಿ ನಡೆಯಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲೋಕಸಭೆ ಕಲಾಪದಲ್ಲಿ ಹೇಳಿದ್ದಾರೆ.

ಹೆಲಿಕಾಪ್ಟರ್ ದುರಂತದ ಬಗ್ಗೆ ತ್ರಿ-ಸೇವಾ ತನಿಖೆಗೆ ಆದೇಶಿಸಲಾಗಿದೆ. ಇನ್ನು ರಾವತ್ ಸೇರಿ ಉಳಿದ 12 ಜನರ ಅಂತಿಮ ಸಂಸ್ಕಾರವನ್ನು ಸಂಪೂರ್ಣ ಸೇನಾ ಗೌರವಗಳೊಂದಿಗೆ ನಡೆಸಲಾಗುವುದು. ಘಟನೆಯಲ್ಲಿ ಬದುಕುಳಿದಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಸ್ಥಿತಿ ಗಂಭೀರವಾಗಿದೆ. ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದ್ದು, ಅಗತ್ಯ ಬಿದ್ದರೆ ಮಿಲಿಟರಿ ಆಸ್ಪತ್ರೆಯಿಂದ ವೆಲ್ಲಿಂಗ್ಟನ್ ಕಮಾಂಡ್ ಆಸ್ಪತ್ರೆಗೆ ವರ್ಗಾಯಿಸಲಾಗುವುದು ಎಂದಿದ್ದಾರೆ.




error: Content is protected !!