ಬೈಕ್-ಟಂಟಂ ಮಧ್ಯೆ ಅಪಘಾತ

297

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಬೈಕ್ ಹಾಗೂ ಟಂಟಂ ವಾಹನದ ನಡುವೆ ಅಪಘಾತ ಸಂಭವಿಸಿದೆ. ಪಟ್ಟಣದ ಕಾಲೇಜು ರಸ್ತೆಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.

ಅಡುಗೆ ಸಿಲಿಂಡರ್ ತುಂಬಿಕೊಂಡು ಹೊರಟಿದ್ದ ಟಂಟಂ ವಾಹನ ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ, ವಿವೇಕಾನಂದ ಸರ್ಕಲ್ ಮಾರ್ಗವಾಗಿ ಬಸವೇಶ್ವರ ಸರ್ಕಲ್ ಕಡೆ ಹೊರಟಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




error: Content is protected !!