ವಿಜಯಪರದಲ್ಲಿ ಬೈಕ್ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು

471

ವಿಜಯಪುರ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ. ಇದೆ ವೇಳೆ ಮತ್ತಿಬ್ಬರಿಗೆ ಗಾಯಗಳಾಗಿವೆ.

ನಗರದ ಇಟಗಿ ಪೆಟ್ರೋಲ್ ಬಂಕ್ ಬಳಿ ಈ ಅಪಘಾತ ನಡೆದಿದೆ. ವಿಜಯಪುರ ನಿವಾಸಿಗಳಾದ 30 ವರ್ಷದ ಸಿದ್ದರಾಮ ಭೈರೊಡಗಿ, ಹಾಗೂ 32 ವರ್ಷದ ವಿಜಯಕುಮಾರ ಧುಳಂಗೆ ಮೃತ ದುರ್ದೈವಿಗಳಾಗಿದ್ದಾರೆ. ನವೀನಕುಮಾರ ಹಾಗೂ ರವಿ ಅನ್ನೋ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಗಾಯಗೊಂಡ ಇಬ್ಬರನ್ನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!