ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆಯುತ್ತೆ: ಯಡಿಯೂರಪ್ಪ

69

ಪ್ರಜಾಸ್ತ್ರ ಸುದ್ದಿ

ಮೈಸೂರು: ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಮೈತ್ರಿಗೆ ಯಾವುದೇ ಸಮಸ್ಯೆಯಿಲ್ಲ. ಇದು ಪರಿಷತ್ ಚುನಾವಣೆಯಲ್ಲೂ ಮುಂದುವರೆಯುತ್ತೆ ಎಂದು ಬಿಜೆಪಿ ಮಾಜಿ ಸಿಎಂ ಯಡಿಯೂರಪ್ಪ ಶನಿವಾರ ಹೇಳಿದ್ದಾರೆ.

ನಾವು 4 ಕ್ಷೇತ್ರ, ಜೆಡಿಎಸ್ ಗೆ 2 ಕ್ಷೇತ್ರ ಬಿಟ್ಟು ಕೊಡುತ್ತೇವೆ. ಯಾವ ಕ್ಷೇತ್ರ ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ. ಸಂಜೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಮಾಹಿತಿ ನೀಡಲಿದ್ದಾರೆ. ಕಾಂಗ್ರೆಸ್ ನವರು ಏನೇ ಹೇಳಿದರೂ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.

ರಾಜ್ಯದಲ್ಲಿ ನಾವು 24-25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ. ಎನ್ ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನ ಗೆದ್ದು ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ. ಕಾಂಗ್ರೆಸ್ ನಲ್ಲಿ ಪ್ರಧಾನಿಯಾಗುವ ಯೋಗ್ಯತೆ ಯಾರಿಗಿದೆ ಎಂದು ಪ್ರಶ್ನಿಸಿದರು. ಪ್ರಜ್ವಲ್ ರೇವಣ್ಣ ಪ್ರಕರಣ ಪಾರದರ್ಶಕವಾಗಿ ನಡೆಯಬೇಕಾದರೆ ಸಿಬಿಐಗೆ ಕೊಡಬೇಕು ಅಂತಾ ಹೇಳಿದರು.




error: Content is protected !!