ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ

59

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಳಿ ಬರುತ್ತಿರುವ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಚೇರಿ ಹಾಗೂ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸೇರಿ ಇತರೆ ಅಕ್ರಮ ಪ್ರಕರಣಗಳನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಆರ್.ಅಶೋಕ್, ರಾಜ್ಯ ಸರ್ಕಾರ ಅಕ್ರಮದಲ್ಲಿ ತೊಡಗಿಕೊಂಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ ಸೇರಿ ಅನೇಕ ಅಕ್ರಮಗಳನ್ನು ಮುಚ್ಚಿ ಹಾಕಲು ನೋಡುತ್ತಿದೆ. ನಾವೇನು ತುರ್ತುಪರಿಸ್ಥಿತಿಯಲ್ಲಿ ಇದ್ದೀವಾ ಎಂದರು.

ಮಾಜಿ ಸಚಿವರಾದ ಸುನಿಲ್ ಕುಮಾರ್, ಅಶ್ವತ್ಥನಾರಾಯಣ್, ಸುರೇಶ್ ಕುಮಾರ್, ಅರಗ ಜ್ಞಾನೇಂದ್ರ, ಪರಿಷತ್ ಸದಸ್ಯ ಸಿ.ಟಿ ರವಿ ಸೇರಿ ಅನೇಕರು ಭಾಗವಹಿಸಿದ್ದರು.




error: Content is protected !!