ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

66

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ನೂತನವಾಗಿ ಪ್ರಾರಂಭವಾಗಿರುವ ಕಲಬುರಗಿ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ಸೋಮವಾರ ಮುಂಜಾನೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

ವಿಮಾನ ನಿಲ್ದಾಣದ ನಿರ್ದೇಶಕ ಚಿಲಕಾ ಮಹೇಶ್ ಅವರ ಮೇಲ್ ಗೆ ನಿಲ್ದಾಣದ ಕಟ್ಟಡದಲ್ಲಿ ಬಾಂಬ್ ಇಡಲಾಗಿದೆ ಎಂದು ಹೇಳಲಾಗಿದೆ. ಇದರಿಂದಾಗಿ ಭದ್ರತಾ ಪಡೆ, ಶ್ವಾನದಳ ಸೇರಿ ಪೊಲೀಸ್ ಅಧಿಕಾರಿಗಳು ಸಹ ತಪಾಸಣೆ ನಡೆಸಿದರು.

ಕಾರ್ಯಕ್ರಮ ನಿಮಿತ್ತ ಬೆಂಗಳೂರಿನಿಂದ ಕಲಬುರಗಿಗೆ ಬಂದಿರುವ ಸಚಿವ ಕೃಷ್ಣಬೈರೇಗೌಡ ಹಾಗೂ ಇತರೆ ಪ್ರಯಾಣಿಕರನ್ನು ಕಳಗೆ ಇಳಿಸದೆ ತಪಾಸಣೆ ನಡೆಸಲಾಯಿತು. ಸುರಕ್ಷಿತವೆಂದು ಕಂಡು ಬಂದ ಮೇಲೆ ಬಿಡಲಾಯಿತು. ವಿಮಾನ ನಿಲ್ದಾಣದಲ್ಲಿ ಪ್ರಯಾಣಕರ ತಪಾಸಣೆ ನಡೆಸಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!