ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿಗಳ ಆಹ್ವಾನ

79

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಕರ್ನಾಟಕ ಜಾನಪದ ಅಕಾಡೆಮಿಯ ವತಿಯಿಂದ 2022(ದಿನಾಂಕ 01-01-2022 ರಿಂದ 31-12-2022ರವರೆಗೆ) ಹಾಗೂ 2023ನೇ (01-01-2023ರಿಂದ 31-12-2023ರವರಗೆ) ಸಾಲಿನಲ್ಲಿ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ(ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಠ 150 ಪುಟಗಳಿಗೂ ಮೇಲ್ಪಟ್ಟಿರುವಂತೆ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ, ಜನಪದ ಸಂಕೀರ್ಣ ಈ ನಾಲ್ಕು ಪ್ರಕಾರಗಳ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳ ಪುಸ್ತಕ ಬಹುಮಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಲೇಖಕರು, ಪ್ರಕಾಶಕರು, ಸಂಪಾದಕರು 4 ಕೃತಿಗಳನ್ನು ದ್ವಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ ಜೆ.ಸಿ. ರಸ್ತೆ ಬೆಂಗಳುರು-560002 ಇವರಿಗೆ ಜುಲೈ 2ರ ಒಳಗೆ ತಲುಪುವಂತೆ ಖುದ್ದಾಗಿ ಕೊರಿಯರ್ ಅಥವಾ ಅಂಚೆ ಮೂಲಕ ಕಳಿಹಿಸಬೇಕು ಎಂದು ವಿಜಯಪುರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!