ಪೋಕ್ಸೋ ಪ್ರಕರಣ ರದ್ದು ಕೋರಿ ಬಿಎಸ್ವೈ ಅರ್ಜಿ

77

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೈಕೋರ್ಟ್ ಗೆ ಬುಧವಾರ ಅರ್ಜಿ ಸಲ್ಲಿಸಿದ್ದಾರೆ.

ನಾನು ಯಾವುದೇ ರೀತಿಯ ಅಪರಾಧವೆಸಗಿಲ್ಲ. ಈ ರೀತಿಯಾಗಿ ದೂರು ಕೊಡುವುದು ಮಹಿಳೆಗೆ ಅಭ್ಯಾಸವಾಗಿತ್ತು. ನನ್ನ ವಿರುದ್ಧ ದೂರು ದಾಖಲಾದ ಮೇಲೆ ವಿಚಾರಣೆಗೆ ಹಾಜರಾಗಿದ್ದೇನೆ. ಏಪ್ರಿಲ್ 12ರಂದು ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳದೆ ಧ್ವನಿ ಮಾದರಿ ಸಂಗ್ರಹಿಸಿದ್ದರು. ಆದರೆ, ದೂರಿನಲ್ಲಿ ತಮ್ಮ ವಿರುದ್ಧ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆ ಪೂರ್ವದಲ್ಲಲಿ ಸಹಾಯ ಕೇಳಿಕೊಂಡು ಮಹಿಳೆ ಹಾಗೂ ಮಗಳು ಯಡಿಯೂರಪ್ಪ ಮನೆಗೆ ಹೋಗಿದ್ದರು. ಈ ವೇಳೆ ಯಡಿಯೂರಪ್ಪ ತಮ್ಮ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದರು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಅಡಿ ದೂರು ದಾಖಲಿಸಿದ್ದರು.

ಇನ್ನು ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಬನ್ನೇರುಘಟ್ಟದ ಹತ್ತಿರ ಇರುವ ಖಾಸಗಿ ಆಸ್ಪತ್ರೆಯಲ್ಲಿ ಮೇ 27ರಂದು ಮೃತಪಟ್ಟಿದ್ದಾರೆ.




Leave a Reply

Your email address will not be published. Required fields are marked *

error: Content is protected !!