ಚಂದ್ರಬಾಬು ನಾಯ್ಡು ನಾಳೆ ಪ್ರಮಣ ವಚನ, ಪವನ್ ಕಲ್ಯಾಣ್ ಡಿಸಿಎಂ?

101

ಪ್ರಜಾಸ್ತ್ರ ಸುದ್ದಿ

ಅಮರಾವತಿ: ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಬುಧವಾರ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮೂಲಕ 4ನೇ ಬಾರಿಗೆ ಮುಖ್ಯಮಂತ್ರಿಯಾಗುತ್ತಿದ್ದಾರೆ.

ಇಂದು ನಡೆದ ಎನ್ ಡಿಎ ಮೈತ್ರಿಕೂಟದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಚಂದ್ರಬಾಬು ನಾಯ್ಡು ಅವರನ್ನು ಆಯ್ಕೆ ಮಾಡಲಾಗಿದೆ. 1995-99, 2004-09 ಹಾಗೂ 2014-19 ಹೀಗೆ ಮೂರು ಬಾರಿ ಸಿಎಂ ಆಗಿದ್ದರು.

ಇನ್ನು ಜನಸೇನಾ ಪಕ್ಷದ ನಾಯಕ, ನಟ ಪವನ್ ಕಲ್ಯಾಣ್ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. 175 ಸ್ಥಾನಗಳಲ್ಲಿ ಟಿಡಿಪಿ 135 ಸ್ಥಾನ, ಜನಸೇನಾ ಸ್ಪರ್ಧಿಸಿರುವ 21 ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸಿದೆ. ಬಿಜೆಪಿ 8, ವೈಎಸ್ಆರ್ ಸಿಪಿ 11 ಸ್ಥಾನಗಳಲ್ಲಿ ಗೆಲುವು ಕಂಡಿದೆ.

ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ಮೋದಿ ಸೇರಿ ಎನ್ ಡಿಎ ನಾಯಕರು ಭಾಗವಹಿಸುವ ಸಾಧ್ಯತೆಗಳಿವೆ.




error: Content is protected !!