ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು

222

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮತದಾರರಿಗೆ ಆಮಿಷ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿಯಿಂದ ಚುನಾವಣೆ ಆಯೋಗಕ್ಕೆ ದೂರು ನೀಡಲಾಗಿದೆ. ಸಿದ್ದರಾಮಯ್ಯ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎನ್ನಲಾಗಿದೆ.

ಸಿಎಂ ಸಿದ್ದರಾಮಯ್ಯ ಪುತ್ರ ಮಾಜಿ ಶಾಸಕ ಯತೀಂದ್ರ ನೀಡಿದ ಕುಕ್ಕರ್ ಹೇಳಿಕೆ ಆಧಾರದ ಮೇಲೆ ದೂರು ಸಲ್ಲಿಸಲಾಗಿದೆ. ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರು ಚುನಾವಣೆ ಆಯೋಗದ ಕಚೇರಿಗೆ ತೆರಳಿ ದೂರು ಸಲ್ಲಿಸಿದ್ದಾರೆ.




error: Content is protected !!