ಖ್ಯಾತ ಬೌಲರ್ ಜೇಮ್ಸ್ ಆಂಡರ್ ಸನ್ ಕ್ರಿಕೆಟಿಗೆ ವಿದಾಯ

95

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಲಂಡನ್: ಇಂಗ್ಲೆಂಡ್ ಕ್ರಿಕೆಟ್ ತಂಡದ ಖ್ಯಾತ ಬೌಲರ್ 41 ವರ್ಷದ ಜೇಮ್ಸ್ ಆಂಡರ್ ಸನ್ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಶನಿವಾರ ವಿದಾಯ ಹೇಳಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧ ಜುಲೈನಲ್ಲಿ ನಡೆಯಲಿರುವ ಟೆಸ್ಟ್ ಟೂರ್ನಿಯ ಮೊದಲ ಪಂದ್ಯ ತಮ್ಮ ವೃತ್ತಿ ಬದುಕಿನ ಕೊನೆಯ ಪಂದ್ಯ ಎಂದಿದ್ದಾರೆ. ಈ ಮೂಲಕ 20 ವರ್ಷಗಳ ಕ್ರಿಕೆಟ್ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ.

187 ಟೆಸ್ಟ್ ಪಂದ್ಯಗಳಿಂದ ಬರೋಬ್ಬರಿ 700 ವಿಕೆಟ್ ಪಡೆದಿದ್ದಾರೆ. ಶ್ರೀಲಂಕಾದ ಮುತ್ತಯ್ಯ ಮುರುಳಿಧರನ್, ಆಸ್ಟ್ರೇಲಿಯಾದ ಶೇನ್ ವಾರ್ನ್ ನಂತರದ ಸ್ಥಾನದಲ್ಲಿದ್ದಾರೆ. 194 ಏಕದಿನ ಪಂದ್ಯಗಳಿಂದ 269 ವಿಕೆಟ್ ಪಡೆದಿದ್ದಾರೆ. ಇಷ್ಟು ವರ್ಷಗಳ ಕಾಲ ತಮಗೆ ಬೆಂಬಲ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!