ನಾಗಮಂಗಲದಲ್ಲಿ ಗುಂಪು ಘರ್ಷಣೆ

74

ಪ್ರಜಾಸ್ತ್ರ ಸುದ್ದಿ

ಮಂಡ್ಯ: ಎರಡು ಗುಂಪುಗಳ ನಡುವೆ ಗಲಾಟೆ ನಡೆದು, ಘರ್ಷಣೆಯ ಹಂತಕ್ಕೆ ಹೋದ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಪಟ್ಟಣದಲ್ಲಿ ಸೋಮವಾರ ರಾತ್ರಿ ನಡೆದಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣವಿದೆ.

ಬೈಕ್ ನಲ್ಲಿ ಅಭಿಷೇಕ್ ಎನ್ನುವ ಯುವಕ ಮನೆಗೆ ಹೊರಟಿದ್ದಾಗ ಮುಸ್ಲಿಂ ಯವಕರ ಗುಂಪು ವೇಗವಾಗಿ ಬೈಕ್ ನಲ್ಲಿ ಬಂದು ಡಿಕ್ಕಿ ಹೊಡೆದಿದ್ದಾರಂತೆ. ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಘಟನೆ ಮೇ 25ರಂದು ನಡೆದಿದೆಯಂತೆ.

ಹಲ್ಲೆ ಮಾಡಿದ ಯುವಕರು ಅಭಿಷೇಕ್ ಮನೆಗೆ ಬಂದು ಗಲಾಟೆ ಮಾಡಿ ಜೀವ ಬೆದರಿಕೆ ಹಾಕಿದ್ದಾರಂತೆ. ಈ ಸಂಬಂಧ ಸೋಮವಾರ ರಾತ್ರಿ ನೂರಾರು ಸಂಖ್ಯೆಯಲ್ಲಿ ಬೆಳ್ಳೂರು ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.

ಮುಸ್ಲಿಂ ಯುವಕರ ಗುಂಪು ಪ್ರತಿದೂರು ದಾಖಲಿಸಿದೆ. ಅಭಿಷೇಕ್ ಹಾಗೂ ಇತರರು ಹಲ್ಲೆ ಮಾಡಿದ್ದಾರೆ ಎಂದು ಪ್ರತಿದೂರು ನೀಡಿದ್ದಾರೆ. ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಅಭಿಷೇಕ್ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರಕರಣದ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ಎನ್.ಯತೀಶ್ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!