ಮದುವೆ ನಿರಾಕರಿಸಿದ ಯುವಕನ ಮರ್ಮಾಂಗ ಕತ್ತರಿಸಿದ ಯುವತಿ

93

ಪ್ರಜಾಸ್ತ್ರ ಸುದ್ದಿ

ಪಾಟ್ನಾ: ಕಳೆದ 2 ವರ್ಷಗಳಿಂದ ಸಂಪರ್ಕದಲ್ಲಿ ಯುವಕ ಹಾಗೂ ಯುವತಿ ಜುಲೈ 1ರಂದು ಛಾಪ್ರಾದ ಕೋರ್ಟ್ ನಲ್ಲಿ ಮದುವೆಯಾಗಬೇಕಿತ್ತು. ಆದರೆ, ಯುವಕ ಮದುವೆಗೆ ನಿರಾಕರಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ಯುವತಿ ಆತನ ಮರ್ಮಾಂಗ ಕತ್ತರಿಸಿದ್ದಾಳೆ.

ಬಿಹಾರದ ಸರನ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಯುವಕನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವತಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

26 ವರ್ಷದ ಯುವತಿ ಹಾಗೂ 30 ವರ್ಷದ ಯುವಕ ಕಳೆದ ವರ್ಷಗಳಿಂದ ಸಂಪರ್ಕದಲ್ಲಿದ್ದಾರೆ. ಮದುವೆಯಾಗುವುದಾಗಿ ಹೇಳಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಈ ಬಗ್ಗೆ ಮದುವೆಗೆ ನಿರಾಕರಿಸಿದ್ದಾನೆ. ಹೀಗಾಗಿ ಆತನ ಮರ್ಮಾಂಗ ಕತ್ತರಿಸಿದ್ದೇನೆ ಎಂದು ಯುವತಿ ಪೊಲೀಸರ ಎದುರು ಒಪ್ಪಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.




error: Content is protected !!