ಇಂಡಿಯಾ ಮೈತ್ರಿಕೂಟ ಗೆಲುವು ಸಾಧಿಸಲಿದೆ: ಮಲ್ಲಿಕಾರ್ಜುನ್ ಖರ್ಗೆ

74

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಇಂಡಿಯಾ ಮೈತ್ರಿಕೂಟದ ಸಭೆಯ ಬಳಿಕ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ನಾವು 295ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಮೈತ್ರಿಕೂಟ ವಿಜಯ ಸಾಧಿಸಲಿದೆ ಎಂದರು.

ನಾವು ಒಗ್ಗಟ್ಟಾಗಿದ್ದೇವೆ. ಒಟ್ಟಾಗಿ ಇರುತ್ತೇವೆ. ನಮ್ಮನ್ನು ವಿಭಜಿಸುವ ಪ್ರಯತ್ನ ಮಾಡಬೇಡಿ ಎಂದಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಎಲ್ಲ ಸ್ಥಾನಗಳನ್ನು ಕಳೆದುಕೊಳ್ಳಲಿದೆ. ಇಂಡಿಯಾ ಮೈತ್ರಿಕೂಟ ಗೆಲುವು ಪಡೆಯುತ್ತೆ ಅಂತಾ ಎಸ್ಪಿ ನಾಯಕ ಅಖಿಲೇಶ್ ಯಾದವ್ ಹೇಳಿದರು.

ಬಿಜೆಪಿಯವರ ಚಾರ್ ಸೌ ಪಾರ್ ಸಿನಿಮಾ ಫ್ಲಾಪ್ ಆಯ್ತೆಂದು ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದರು. ಈ ವೇಳೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಎನ್ ಸಿಪಿ ನಾಯಕ ಶರದ್ ಪವಾರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.




error: Content is protected !!