ಹೆಲಿಕಾಪ್ಟರ್ ಪತನ, ಇರಾನ್ ಅಧ್ಯಕ್ಷ ಸಾವು

100

ಪ್ರಜಾಸ್ತ್ರ ಅಂತಾರಾಷ್ಟ್ರೀಯ ಸುದ್ದಿ

ದುಬೈ: ಹೆಲಿಕಾಪ್ಟರ್ ಪತನದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಇತರರು ಮೃತಪಟ್ಟಿದ್ದಾರೆ. ಈ ಕುರಿತು ಇರಾನ್ ರೆಡ್ ಕ್ರೆಸೆಂಟ್ ಸೊಸೈಟಿಯ ಮುಖ್ಯಸ್ಥ ಪಿರ್ ಹೊಸೈನ್ ಕೊಲಿವಾಂಡ್ ಸುದ್ದಿಸಂಸ್ಥೆಗಳಿಗೆ ಮಾಹಿತಿ ನೀಡಿದ್ದಾರೆ.

ಹೆಲಿಕಾಪ್ಟರ್ ಭಾನುವಾರ ಪತನಗೊಂಡಿದೆ. ಇರಾನ್ ಅಧ್ಯಕ್ಷ ರೈಸಿ, ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್, ಅಜೆರ್ಬೈಜನ್ ಪ್ರಾಂತ್ಯದ ಗವರ್ನರ್ ಮಾಲೆಕ್ ರೆಹಮತಿ ಸೇರಿದಂತೆ ಭದ್ರತಾ ಮುಖ್ಯಸ್ಥ, ಪೈಲೆಟ್ ಮುಖ್ಯಸ್ಥ, ಸಿಬ್ಬಂದಿ, ಗನ್ ಮ್ಯಾನ್ ಗಳು ಎಲ್ಲರೂ ಮೃತಪಟ್ಟಿದ್ದಾರೆ ಎಂದು ತಿಳಿಸಲಾಗಿದೆ.

ನೆರೆಯ ದೇಶವಾದ ಅಝರ್ಬೈಜನ್ ನಲ್ಲಿ ಅಲ್ಲಿನ ಅಧ್ಯಕ್ಷ ಇಲ್ಹಾಮ್ ಅಲಿಯೆವ್ ಅವರೊಂದಿಗೆ ಆಣೆಕಟ್ಟು ಉದ್ಘಾಟನಾ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಎರಡು ಬೆಂಗಾವಲು ಹೆಲಿಕಾಪ್ಟರ್ ಗಳು ಸುರಕ್ಷಿತವಾಗಿ ಹಿಂದಿರುಗಿವೆ. ಇವುಗಳಲ್ಲಿದ್ದ ಇಂಧನ ಸಚಿವ ಹಾಗೂ ವಸತಿ ಸಚಿವರು ಸುರಕ್ಷಿತವಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!