ಸೂರಜ್ ರೇವಣ್ಣ ಬಂಧನ, ಹೆಚ್.ಡಿ ರೇವಣ್ಣ ಕುಟುಂಬಕ್ಕೆ ತಪ್ಪದ ಸಂಕಷ್ಟ

61

ಪ್ರಜಾಸ್ತ್ರ ಸುದ್ದಿ

ಹಾಸನ: ಯುವಕನ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪದ ಮೇಲೆ ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣರನ್ನು ಭಾನುವಾರ ಮುಂಜಾನೆ ಬಂಧಿಸಲಾಗಿದೆ. ಇದರೊಂದಿಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಕುಟುಂಬದವರೆಲ್ಲರ ಮೇಲೂ ಒಂದಲ್ಲ ಒಂದು ಪ್ರಕರಣ ದಾಖಲಾಗಿ ಪೊಲೀಸರ ಅತಿಥಿಯಾಗುತ್ತಿದ್ದಾರೆ.

ಸಂತ್ರಸ್ತ ನೀಡಿದ ದೂರಿನ ಆಧಾರದ ಮೇಲೆ ಸಿಇಎನ್ ಪೊಲೀಸರು ಶನಿವಾರ ಸಂಜೆ 7.30ರ ಸುಮಾರಿಗೆ ಸೂರಜ್ ರೇವಣ್ಣನನ್ನು ವಿಚಾರಣೆ ಕರೆದುಕೊಂಡು ಬರಲಾಗಿದೆ. ಸಂತ್ರಸ್ತ ನೀಡಿದ ದೂರು ಹಾಗೂ ಸೂರಜ್ ಆಪ್ತ ನೀಡಿದ ದೂರಿನ ಬಗ್ಗೆ ವಿಚಾರಣೆ ನಡೆಸಲಾಗಿದೆ.

ಹಾಸನ ಎಸ್ಪಿ ಮೊಹಮ್ಮದ್ ಸುಜೀತಾ ಠಾಣೆಗೆ ರಾತ್ರಿ ಭೇಟಿ ಕೊಟ್ಟು ಅಧಿಕಾರಿಗಳಿಗೆ ಸೂಚನೆ ನೀಡಿ ಹೋಗಿದ್ದರು. ಸಂತ್ರಸ್ತನನ್ನು ವೈದ್ಯಕೀಯ ಪರೀಕ್ಷೆಗೆ ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದ ಪೊಲೀಸರು ವರದಿಗಾಗಿ ಕಾಯುತ್ತಿದ್ದಾರೆ. ಸಕಲೇಶ್ವರ ಡಿವೈಎಸ್ಪಿ ಪ್ರಮೋದ್ ಕುಮಾರ್ ಸೂರಜನನ್ನು ಬಂಧಿಸಿದ್ದು ಇಂದು ಮಧ್ಯಾಹ್ನ ಕೋರ್ಟಿಗೆ ಹಾಜರು ಪಡಿಸಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!