ಸೂರಜ್ ರೇವಣ್ಣಗೆ ನ್ಯಾಯಾಂಗ ಬಂಧನ

101

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಜೆಡಿಎಸ್ ಪರಿಷತ್ ಸದಸ್ಯ ಸೂರಜ್ ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಸಿಐಡಿ ಕಸ್ಟಡಿ ಅವಧಿ ಇಂದು ಮುಗಿದ ಹಿನ್ನಲೆ ಕೋರ್ಟಿಗೆ ಹಾಜರು ಪಡಿಸಲಾಗಿತ್ತು.

ಆರೋಪಿಯನ್ನು 42ನೇ ಎಸಿಎಂಎಂ ಕೋರ್ಟ್ ಗೆ ಹಾಜರು ಪಡಿಸಲಾಯಿತು. ವಿಚಾರಣೆ ನಡೆಸಿದ ಕೋರ್ಟ್ ಜುಲೈ 18ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಹೀಗಾಗಿ ಇವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗುತ್ತೆ. ಜೂನ್ 23ರಂದು ಸೂರಜ್ ರೇವಣ್ಣರನ್ನು ಬಂಧಿಸಲಾಗಿದೆ.




error: Content is protected !!