ಜವಾಬ್ದಾರಿಯುತ ವಿರೋಧ ಪಕ್ಷದ ಅವಶ್ಯಕತೆಯಿದೆ: ಪ್ರಧಾನಿ ಮೋದಿ

55

ಪ್ರಜಾಸ್ತ್ರ ಸುದ್ದಿ

ನವದೆಹಲಿ: 18ನೇ ಲೋಕಸಭೆಯ ಅಧಿವೇಶನ ಆರಂಭಕ್ಕೂ ಮೊದಲು ಪ್ರಧಾನಿ ಮೋದಿ ಮಾಧ್ಯಮ ಉದ್ದೇಶಿಸಿ ಮಾತನಾಡಿದರು. ಸ್ವಾತಂತ್ರ್ಯದ ನಂತರ ಇದೆ ಮೊದಲ ಬಾರಿಗೆ ನಮ್ಮದೆ ನೂತನ ಸಂಸತ್ ನಲ್ಲಿ ಪ್ರಮಾಣ ವಚನ ಹಾಗೂ ಸದಸ್ಯತ್ವ ಸ್ವೀಕಾರ ನಡೆಯುತ್ತಿದೆ. ದೇಶದ ಅಭಿವೃದ್ಧಿಗೆ ಜವಾಬ್ದಾರಿಯು ವಿರೋಧ ಪಕ್ಷದ ಅವಶ್ಯಕತೆ ಸಹ ಇದೆ ಎಂದರು.

2047ರ ಹೊತ್ತಿಗೆ ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ಇಟ್ಟುಕೊಂಡಿದ್ದೇವೆ. ಇನ್ನು ನಾಳೆ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ 50 ವರ್ಷಗಳು ಆಗಲಿದೆ. ಈ ದಿನ ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆಯಾಗಿದೆ ಎಂದರು.

ಇನ್ನು 18ನೇ ಲೋಕಸಭೆಯ ನೂತನ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು. ಇದೆ ವೇಳೆ ಸಂಸತ್ ಸದಸ್ಯರು ತಮ್ಮ ಸದಸ್ಯತ್ವವನ್ನು ಸ್ವೀಕರಿಸಿದರು.




Leave a Reply

Your email address will not be published. Required fields are marked *

error: Content is protected !!