ಕೊನೆಯ ಹಂತದ ಮತದಾನ, ಸಂಜೆ 6.30ಕ್ಕೆ ಮತಗಟ್ಟೆ ಸಮೀಕ್ಷೆ

93

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಲೋಕಸಭಾ ಚುನಾವಣೆಗೆ ದೇಶದಲ್ಲಿ 7 ಹಂತಗಳಲ್ಲಿ ಮತದಾನ ನಡೆಯಿತು. ಇಂದು ಕೊನೆಯ ಹಂತದ ಮತದಾನ ನಡೆಯುತ್ತಿದ್ದು, ದೇಶದ ವಿವಿಧ ರಾಜ್ಯಗಳ 57 ಕ್ಷೇತ್ರಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಚುನಾವಣೆ ಆಯೋಗದ ಮಾರ್ಗಸೂಚಿ ಪ್ರಕಾರ ಸಂಜೆ 6.30ರ ನಂತರ ಮತಗಟ್ಟೆ ಸಮೀಕ್ಷೆಯನ್ನು ಪ್ರಸಾರ ಮಾಡಬಹುದಾಗಿದೆ. ಹೀಗಾಗಿ ಮಾಧ್ಯಮಗಳು ಹಾಗೂ ಇತರೆ ಸಂಸ್ಥೆಗಳು ತಮ್ಮ ಸಮೀಕ್ಷೆಯನ್ನು ಬಿಡುಗಡೆ ಮಾಡಲಿದ್ದು, ಜನರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.

ದೇಶದಲ್ಲಿ 543 ಲೋಕಸಭಾ ಕ್ಷೇತ್ರಗಳಿವೆ. ಕರ್ನಾಟಕದಲ್ಲಿ 28 ಸ್ಥಾನಗಳಿದ್ದು, ಏಪ್ರಿಲ್ 26 ಹಾಗೂ ಮೇ 7 ಎರಡು ಹಂತದಲ್ಲಿ ಮತದಾನ ನಡೆದಿದೆ. ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ. ಆಗ ದೇಶವನ್ನು ಯಾರು ಮುನ್ನಡೆಸಲಿದ್ದಾರೆ ಎನ್ನುವುದಕ್ಕೆ ಉತ್ತರ ಸಿಗಲಿದೆ.




error: Content is protected !!