ಮುನ್ನಡೆಯಲ್ಲಿ ದ್ವಿಶತಕ ಬಾರಿಸಿದ ಇಂಡಿಯಾ, ಎನ್ ಡಿಎ

60

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ದೇಶದ 543 ಲೋಕಸಭಾ ಕ್ಷೇತ್ರಗಳ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ನಡೆಯುತ್ತಿದೆ. ಕಾಂಗ್ರೆಸ್ ನೇತೃತ್ವದ ಇಂಡಿಯಾ ಹಾಗೂ ಬಿಜೆಪಿ ನೇತೃತ್ವದ ಎನ್ ಡಿಎ ನಡುವೆ ಫೈಟ್ ನಡೆದಿದೆ.

ಎರಡು ಪಡೆಗಳು ಮುನ್ನಡೆಯಲ್ಲಿ ದ್ವಿಶತಕ ಬಾರಿಸಿವೆ. 281 ಕ್ಷೇತ್ರಗಳಲ್ಲಿ ಎನ್ ಡಿಎ ಮುನ್ನಡೆ ಇದೆ. 212 ಕ್ಷೇತ್ರಗಳಲ್ಲಿ ಇಂಡಿಯಾ ಮುನ್ನಡೆ ಇದ್ದರೆ, 21 ಕ್ಷೇತ್ರಗಳಲ್ಲಿ ಪಕ್ಷೇತರ ಅಭ್ಯರ್ಥಿಗಳು ಮುಂದೆ ಇದ್ದಾರೆ.

ಕರ್ನಾಟಕದ 28 ಕ್ಷೇತ್ರಗಳಲ್ಲಿ ಬಿಜೆಪಿ 17, ಕಾಂಗ್ರೆಸ್ 8 ಹಾಗೂ ಜೆಡಿಎಸ್ 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇದರೊಂದಿಗೆ ಕಾಂಗ್ರೆಸ್ ಎರಡಂಕಿ ದಾಟುವ ಸಾಧ್ಯತೆಯಿದೆ.




Leave a Reply

Your email address will not be published. Required fields are marked *

error: Content is protected !!