ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ದುರಂತ: ರಾಷ್ಟ್ರಪತಿ, ಸಿಎಂ ಸಂತಾಪ

99

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿನ ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ ನಡೆದಿದೆ. ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, 7 ಶಿಶುಗಳು ಮೃತಪಟ್ಟಿವೆ. 12 ಶಿಶುಗಳನ್ನು ರಕ್ಷಿಸಲಾಗಿದೆ.

ರಾತ್ರಿ ಸುಮಾರು 11.30ರ ಹೊತ್ತಿಗೆ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದಕ್ಕೆ ಕಾರಣ ಏನೆಂದು ಇನ್ನು ತಿಳಿದು ಬಂದಿಲ್ಲ. ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ. 12 ಶಿಶುಗಳನ್ನು ರಕ್ಷಿಸಲಾಗಿದ್ದು, 6 ಶಿಶುಗಳಿಗೆ ಗಾಯಗಳಾಗಿದ್ದು ಚಿಕಿತ್ಸೆ ನಡೆಸಲಾಗುತ್ತಿದೆ.

ಘಟನೆ ಬಗ್ಗೆ ಸಿಎಂ ಅರವಿಂದ್ ಕೇಜ್ರಿವಾಲ್ ನೋವು ಹಂಚಿಕೊಂಡಿದ್ದಾರೆ. ಇದೊಂದು ಹೃದಯ ವಿದ್ರಾವಕ ಘಟನೆ. ನಿರ್ಲಕ್ಷ್ಯಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದಿದ್ದಾರೆ. ಮಕ್ಕಳನ್ನು ಕಳೆದುಕೊಂಡು ಕುಟುಂಬದ ಜೊತೆಗೆ ಸರ್ಕಾರ ಇರುತ್ತದೆ. ಗಾಯಗೊಂಡ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇದೊಂದು ನೋವಿನ ಘಟನೆ. ಹೆತ್ತವರಿಗೆ, ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ. ಗಾಯಗೊಂಡ ಮಕ್ಕಳು ಬೇಗ ಗುಣಮುಖರಾಗಲಿ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.




error: Content is protected !!