ಪ್ರಧಾನಿ ಸ್ಥಾನಕ್ಕೆ ಮೋದಿ ರಾಜೀನಾಮೆ

72

ಪ್ರಜಾಸ್ತ್ರ ಸುದ್ದಿ

ನವದೆಹಲಿ: ತಮ್ಮ ಸಚಿವ ಸಂಪುಟದ ಸಹದ್ಯೋಗಿಗಳ ಜೊತೆಗೆ ಬುಧವಾರ ರಾಷ್ಟ್ರಪತಿ ಭವನಕ್ಕೆ ತೆರಳಿದ ಮೋದಿ ತಮ್ಮ ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ 17ನೇ ಲೋಕಸಭೆಯನ್ನು ವಿಸರ್ಜನೆಗೊಳಿಸಲಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. 17ನೇ ಲೋಕಸಭಾ ಅವಧಿ ಜೂನ್ 16ರ ತನಕವಿದೆ. ಹೊಸ ಸರ್ಕಾರ ರಚನೆಯಾಗುವ ತನಕ ಪ್ರಧಾನಿಯಾಗಿ ಮುಂದುವರೆಯುವಂತೆ ರಾಷ್ಟ್ರಪತಿಗಳು ಸೂಚಿಸಿದ್ದಾರೆ ಎನ್ನಲಾಗುತ್ತಿದೆ.

ಮಂಗಳವಾರ ಬಂದ ಫಲಿತಾಂಶದಲ್ಲಿ 543 ಸ್ಥಾನಗಳಲ್ಲಿ ಎನ್ ಡಿಎ ಕೂಟ 292 ಸ್ಥಾನಗಳನ್ನು ಪಡೆದಿದೆ. ಇದರಲ್ಲಿ ಬಿಜೆಪಿ 240 ಸ್ಥಾನಗಳನ್ನು ಹೊಂದಿದೆ. ಆದ್ರೆ, ಮ್ಯಾಜಿಕ್ 272 ದಾಟಿಲ್ಲ. ಹೀಗಾಗಿ ಸರ್ಕಾರ ರಚನೆಗೆ ಮಿತ್ರಪಕ್ಷಗಳ ಸಹಾಯ ಬೇಕಿದೆ.

ಇನ್ನು ಕಾಂಗ್ರೆಸ್ 99 ಸ್ಥಾನಗಳನ್ನು ಪಡೆದಿದೆ. ಇದರ ನೇತೃತ್ವದ ಇಂಡಿಯಾ ಮೈತ್ರಿಕೂಟ 232 ಸ್ಥಾನಗಳನ್ನು ಪಡೆದುಕೊಂಡಿದೆ. ಹೀಗಾಗಿ ಸರ್ಕಾರ ರಚನೆಯ ಕಸರತ್ತು ಜೋರಾಗಿ ನಡೆದಿದೆ.




error: Content is protected !!