ಹಾಸನದಲ್ಲಿ ಇಬ್ಬರ ನಿಗೂಢ ಹತ್ಯೆ!

68

ಪ್ರಜಾಸ್ತ್ರ ಅಪರಾಧ ಸುದ್ದಿ

ಹಾಸನ: ನಗರದ ಹೊಯ್ಸಳ ಬಡಾವಣೆಯಲ್ಲಿ ಇಬ್ಬರು ವ್ಯಕ್ತಿಗಳ ನಿಗೂಢ ಹತ್ಯೆಯಾಗಿದೆ. ಒಬ್ಬರ ಮೇಲೆ ಒಬ್ಬರು ಗುಂಡು ಹಾರಿಸಿ, ನಂತರ ಮತ್ತೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅನ್ನೋ ಶಂಕೆ ವ್ಯಕ್ತವಾಗಿದೆ ಎಂದು ಎಸ್ಪಿ ಹೇಳಿದ್ದಾರೆ.

ಆಸ್ತಿ ವಿಚಾರವಾಗಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಸೈಟ್ ನೋಡಲು ಬಂದಾಗ ಈ ಕೃತ್ಯ ನಡೆದಿದೆಯಂತೆ. ಮಧ್ಯಾಹ್ನ ಸುಮಾರು 12.30ರಿಂದ 1ಗಂಟೆಯೊಳಗೆ ಈ ಘಟನೆ ನಡೆದಿದೆ. ಮೃತದೇಹ ನೋಡಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಬ್ಬರಿಗೆ ತಲೆಗೆ ಗಾಯವಿದೆ. ಮತ್ತೊಬ್ಬರು ಆತ್ಮಹತ್ಯೆ ಮಾಡಿಕೊಂಡ ರೀತಿ ಇದೆ ಎಂದು ಎಸ್ಪಿ ಮೊಹಮ್ಮದ್ ಸುಜಿತಾ ಹೇಳಿದ್ದಾರೆ.

ಕೆ.ಆರ್ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಾರು ಮೈಸೂರು ವ್ಯಾಪ್ತಿಯಲ್ಲಿ ನೋಂದಣಿಯಾಗಿ ಎಂದು ಸಧ್ಯಕ್ಕೆ ಕಂಡು ಬಂದಿದೆ. ಅದು ಹಾಸನಕ್ಕೆ ವರ್ಗಾವಣೆಯಾಗಿದ್ಯಾ, ಮೃತರು ಯಾರು? ಯಾವ ಕಾರಣಕ್ಕೆ ಈ ಘಟನೆ ನಡೆದಿದೆ ಅನ್ನೋದು ತನಿಖೆ ನಡೆಯುತ್ತಿದೆ ಎಂದಿದ್ದಾರೆ. ಎಫ್ಎಸ್ಎಲ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.




Leave a Reply

Your email address will not be published. Required fields are marked *

error: Content is protected !!