ಹಂಸಲೇಖಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ

81

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಮಂಡ್ಯ: ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 1 ಲಕ್ಷ ರೂಪಾಯಿ ನಗದು, ಪ್ರಶಸ್ತಿ ಫಲಕ ನೀಡಲಾಗುವುದು ಎಂದು ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ಹೇಳಿದ್ದಾರೆ.

ಜೂನ್ 30ರಂದು ಮಧ್ಯಾಹ್ನ 3 ಗಂಟೆಗೆ ರೈತ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಕೃಷಿ ಸಚಿವ ಚೆಲುವರಾಯಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಅಂತಾ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.




Leave a Reply

Your email address will not be published. Required fields are marked *

error: Content is protected !!