ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕನೆಂದು ಸ್ಪೀಕರ್ ಘೋಷಣೆ

64

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಈಗ ಅಧಿಕೃತ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಬುಧವಾರ ಲೋಕಸಭೆಯ ಆಡಳಿತಾಧಿಕಾರಿ ಅಧಿಸೂಚನೆ ಹೊರಡಿಸಿದ್ದಾರೆ. ಸ್ಪೀಕರ್ ಓಂ ಬಿರ್ಲಾ ಅವರು ಅಧಿಕೃತ ವಿರೋಧ ಪಕ್ಷದ ನಾಯಕನ ಸ್ಥಾನಮಾನ ನೀಡಲಾಗಿದೆ ಎಂದು ಘೋಷಿಸಿದ್ದಾರೆ.

ಇಂಡಿಯಾ ಮೈತ್ರಿಕೂಟ ನಾಯಕರ ಸಭೆಯಲ್ಲಿ ರಾಹುಲ್ ಗಾಂಧಿಯನ್ನು ವಿರೋಧ ಪಕ್ಷದ ನಾಯಕನೆಂದು ಘೋಷಣೆ ಮಾಡಲಾಗಿತ್ತು. ಇದನ್ನು ಬುಧವಾರ ಲೋಕಸಭೆಯಲ್ಲಿ ಅಧಿಕೃತಗೊಳಿಸಲಾಯಿತು. ಜೂನ್ 9ರಿಂದ ಜಾರಿಗೆ ಬರುವಂತೆ ತಿಳಿಸಲಾಯಿತು.

ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ, ಸರ್ಕಾರಕ್ಕೆ ರಾಜಕೀಯ ಬಲವಿರಬಹುದು. ವಿಪಕ್ಷಗಳು ಜನರ ಧ್ವನಿಯನ್ನು ಪ್ರತಿನಿಧಿಸುತ್ತವೆ. ಸದನದಲ್ಲಿ ನಮಗೂ ಮಾತನಾಡಲು ಅವಕಾಶ ನೀಡುವ ನಂಬಿಕೆ ಎಂದು ಹೇಳಿ ಎಲ್ಲ ಸಂಸದರನ್ನು ಅಭಿನಂದಿಸಿದರು.




Leave a Reply

Your email address will not be published. Required fields are marked *

error: Content is protected !!