‘ಮಹಾವಿಕಾಸ ಅಘಾಡಿ’ ಅಸ್ತಿತ್ವಕ್ಕೆ ಕ್ಷಣಗಣನೆ

331

ಮುಂಬೈ: ಮಹಾರಾಷ್ಟ್ರದಲ್ಲಿಂದು ಮಹಾವಿಕಾಸ ಅಘಾಡಿ ಸರ್ಕಾರ ರಚನೆಯಾಗ್ತಿದೆ. ಸಾಕಷ್ಟು ಹೈಡ್ರಾಮಾ ನಡೆದು, ದೇವೇಂದ್ರ ಫಡ್ನವಿಸ್ ರಾಜೀನಾಮೆ ನೀಡಿದ ಬಳಿಕ ಉದ್ಧವ್ ಠಾಕ್ರೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡ್ತಿದ್ದಾರೆ.

ಬಧುವಾರ ಸಂಜೆ ಸತತ 6 ಗಂಟೆಗಳ ಕಾಲ ನಡೆದ ಸುದೀರ್ಘ ಚರ್ಚೆಯ ಬಳಿಕ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಐದು ವರ್ಷ ಸಿಎಂ ಆಗಿರಲಿದ್ದಾರೆ. ಎನ್ ಸಿಪಿಗೆ ಡಿಸಿಎಂ ಸ್ಥಾನ ಹಾಗೂ ಕಾಂಗ್ರೆಸ್ ಪಾಲಿಗೆ ಸ್ಪೀಕರ್ ಪಟ್ಟ ಹಂಚಿಕೆಯಾಗಿದೆ. ಹೀಗಾಗಿ ಇಂದು ನಡೆಯುವ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ಹಾಗೂ ಸಚಿವರ ಪದಗ್ರಹಣ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ ಶಾ, ಮಾಜಿ ಪ್ರಧಾನಿ ಮನಮೋಹನ ಸಿಂಗ್, ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ, ಯುವ ನಾಯಕ ರಾಹುಲ ಗಾಂಧಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಅನೇಕರಿಗೆ ಆಹ್ವಾನ ನೀಡಲಾಗಿದೆ. ಇದರಲ್ಲಿ ಎಷ್ಟು ಜನ ಹಾಜರಿ ಹಾಕ್ತಾರೆ ಅನ್ನೋದು ಸದ್ಯದಲ್ಲಿಯೇ ತಿಳಿಯಲಿದೆ.




error: Content is protected !!