ಜೂ.12ರಂದು ವಿವೇಕಾನಂದ, ಚನ್ನಮ್ಮ ಮೂರ್ತಿ ಪ್ರತಿಷ್ಠಾಪನೆ

137

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಜೂನ್ 12ರಂದು ಪಟ್ಟಣದಲ್ಲಿ ಸ್ವಾಮಿ ವಿವೇಕಾನಂದ ಹಾಗೂ ಕಿತ್ತೂರ ರಾಣಿ ಚನ್ನಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಎರಡು ಸಮಿತಿಯ ಮುಖಂಡರು ಹೇಳಿದ್ದಾರೆ.

ಇತ್ತೀಚೆಗೆ ಬಸವ ಮಂಟಪದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಸಿದ್ದನಗೌಡ ಪಾಟೀಲ ಹೂನಳ್ಳಿ ಅವರು, ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಸ್ವಾಮಿ ವಿವೇಕಾನಂದ ಮೂರ್ತಿ ಹಾಗೂ ಕಿತ್ತೂರ ರಾಣಿ ಚನ್ನಮ್ಮ ಮೂರ್ತಿ ಪ್ರತಿಷ್ಠಾಪನೆ ಜೂನ್ 12ರಂದು ನಡೆಯಲಿದೆ. ಅಂದು ಮುಂಜಾನೆ 10 ಗಂಟೆಗೆ ಕನಕದಾಸ ಸರ್ಕಲ್ ನಿಂದ ಮೆರವಣಿಗೆ ನಡೆಸಲಾಗುವುದು. ಮೊದಲು ವಿವೇಕಾನಂದ ಮೂರ್ತಿ, ನಂತರ ಚನ್ನಮ್ಮ ಮೂರ್ತಿ ಪ್ರತಿಷ್ಠಾಪಿಸಲಾಗುವುದು ಎಂದರು.

ಈ ವೇಳೆ ಶಾಸಕ ಅಶೋಕ ಮನಗೂಳಿ ಸೇರಿದಂತೆ ವಿವಿಧ ಮಠಗಳ ಸ್ವಾಮೀಜಿಗಳು, ಸರ್ವಸಮಾಜದ ಮುಖಂಡರು ಭಾಗವಹಿಸಲಿದ್ದಾರೆ. ಮುಂದೆ ಮೂರ್ತಿ ಅನಾವರಣ ಕಾರ್ಯವನ್ನು ದೊಡ್ಡ ಮಟ್ಟದಲ್ಲಿ ಮಾಡಲಾಗುವುದು ಅಂತಾ ತಿಳಿಸಿದರು. ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷರಾದ ಎಂ.ಎಂ ಹಂಗರಗಿ, ಸಂಗು ಬಿರಾದಾರ, ವಿವೇಕಾನಂದ ಸರ್ಕಲ್ ಸಮಿತಿಯ ಬಸು ಪಾಟೀಲ, ಶಿವಾನಂದ ನಿಗಡಿ ಮಾತನಾಡಿದರು.

ಈ ವೇಳೆ ಗುರು ಬಸರಕೋಡ, ಮಲ್ಲನಗೌಡ ಪಾಟೀಲ, ರುದ್ರಗೌಡ ಬಿರಾದಾರ, ಸಂತೋಷ ಭಜಂತ್ರಿ, ಗಂಗಾಧರ ರುಂಕುಪುರ, ಬಾಪುಗೌಡ ಬಿರಾದಾರ, ಮಲ್ಲನಗೌಡ ಪಾಟೀಲ ಇಬ್ರಾಹಿಂಪುರ ಸೇರಿ ಅನೇಕರು ಉಪಸ್ಥಿತರಿದ್ದರು. ಪಂಚಮಸಾಲಿ ಸಮಾಜದ ತಾಲೂಕು ಪ್ರಧಾನ ಕಾರ್ಯದರ್ಶಿ ಆನಂದ ಶಾಬಾದಿ ನಿರೂಪಿಸಿ ವಂದಿಸಿದರು.




Leave a Reply

Your email address will not be published. Required fields are marked *

error: Content is protected !!