ಕಟ್ಟಡದಿಂದ ಬಿದ್ದು ಭಾರತದ ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ ನಿಧನ

100

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇಂಡಿಯನ್ ಕ್ರಿಕೆಟ್ ಟೀಂ ಮಾಜಿ ಆಟಗಾರ, ಕನ್ನಡಿಗ ಡೇವಿಡ್ ಜಾನ್ಸನ್ ಗುರವಾರ ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದಾರೆ. 52 ವರ್ಷದ ಡೇವಿಡ್ ಜಾನ್ಸನ್ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣಕ್ಕೆ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗುತ್ತಿದೆ.

ಕೊತ್ತನೂರು ಹತ್ತಿರ ಇರುವ ಅಪಾರ್ಟ್ ಮೆಂಟ್ ನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. 1996ರಲ್ಲಿ ಆಸೀಸ್ ವಿರುದ್ದ 2 ಟೆಸ್ಟ್ ಪಂದ್ಯಗಳನ್ನಾಡಿದ್ದರು. ಆಗ 3 ವಿಕೆಟ್ ಪಡೆದಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಗಳ ಬಳಿಕ ಟೀಂ ಇಂಡಿಯಾದಲ್ಲಿ ಅವರಿಗೆ ಅವಕಾಶ ಸಿಗಲಿಲ್ಲ.

ಕರ್ನಾಟಕ ಪ್ರೀಮಿಯರ್ ಲೀಗ್ ನಲ್ಲಿ ಬೆಳಗಾವಿ ಪ್ಯಾಂಥರ್ಸ್ ತಂಡದಲ್ಲಿ ಕೋಚ್ ಆಗಿ ಕೆಲಸ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!