ನಟಿ ಛಾಯಾ ಸಿಂಗ್ ಮನೆಯಲ್ಲಿ ಕಳ್ಳತನ

150

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬೆಂಗಳೂರು: ಕನ್ನಡ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಷೆಗಳಲ್ಲಿ ನಟಿಸಿರುವ ನಟಿ ಛಾಯಾ ಸಿಂಗ್ ಅವರ ಮನೆಯಲ್ಲಿ ಕಳ್ಳತನವಾಗಿದೆ. ಮನೆ ಕೆಲಸದಾಕೆಯಿಂದಲೇ ಈ ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದೆ.

66 ಗ್ರಾಂ ಚಿನ್ನಾಭರಣ ಸೇರಿದಂತೆ 150 ಗ್ರಾಂ ಬೆಳ್ಳಿ ಆಭರಣಗಳನ್ನು ಕಳ್ಳತನ ಮಾಡಲಾಗಿದೆ. ಈ ಬಗ್ಗೆ ನಟಿ ಛಾಯಾ ಸಿಂಗ್ ತಾಯಿ ಚಮನಲತಾ ಅವರಿಗೆ ಗೊತ್ತಾದ್ಮೇಲೆ ಮನೆ ಕೆಲಸದಾಕೆಗೆ ಕೇಳಿದ್ದಾರೆ. ಆಕೆ ಏನು ಗೊತ್ತಿಲ್ಲವೆಂದು ಹೇಳಿದ್ದಾಳಂತೆ. ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಂತರ ಪೊಲೀಸ್ ತನಿಖೆ ವೇಳೆ ಕಳ್ಳತನ ಮಾಡಿರುವ ಬಗ್ಗೆ ಮನೆ ಕೆಲಸದಾಕೆ ಒಪ್ಪಿಕೊಂಡಿದ್ದಾಳಂತೆ.




Leave a Reply

Your email address will not be published. Required fields are marked *

error: Content is protected !!