ಜು.2ರಂದು ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

68

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಡಾ.ಫ.ಗು.ಹಳಕಟ್ಟಿಯವರ ಜನ್ಮದಿನ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಜುಲೈ 2ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮುಂಜಾನೆ 10 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಸಚಿವ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-2 ಹಾಗೂ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತ ಅಧ್ಯಕ್ಷರು, ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದ ರಮೇಶ ಜಿಗಜಿಣಗಿ, ರಾಜ್ಯಸಭಾ ಸಂಸದೆ ಸುಧಾ ಮೂರ್ತಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ವಿಠ್ಠಲ ಕಟಕದೊಂಡ, ಭೀಮನಗೌಡ (ರಾಜುಗೌಡ) ಪಾಟೀಲ, ಅಶೋಕ ಮನಗೂಳಿ, ಮಹಾನಗರ ಪಾಲಿಕೆ ಮಹಾಪೌರರಾದ ಮಹೇಜಬಿನ ಹೊರ್ತಿ, ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನಾನ್ ಅಬ್ದುಲಹಮೀದ್ ಮುಶ್ರೀಫ್ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿ ಸಂಶೋಧನಾ ಕೇಂದ್ರದ ಸಂಯೋಜನಾಧಿಕಾರಿಗಳಾದ ಡಾ.ವಿ.ಡಿ.ಐಹೊಳ್ಳಿ ವಿಶೇಷ ಉಪನ್ಯಾಸ ನೀಡಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!