ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಯತ್ನ: ವಿಜಯೇಂದ್ರ ಪೊಲೀಸ್ ವಶಕ್ಕೆ

58

ಪ್ರಜಾಸ್ತ್ರ ಸುದ್ದಿ

ಚಿತ್ರದುರ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ 187 ಕೋಟಿ ರೂಪಾಯಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದಾಗ ಅವರನ್ನು ವಶಕ್ಕೆ ಪಡೆಯಲಾಗಿದೆ.

ಒನಕೆ ಓಬವ್ವ ಸರ್ಕಲ್ ನಿಂದ ಪ್ರತಿಭಟನೆ ನಡೆಸಿದರು. ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಜಿಲ್ಲಾಧಿಕಾರಿ ಮುಂದೆ ಹಾಕಿದ್ದ ಬ್ಯಾರಿಕೇಡ್ ಮೇಲೇರಿ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಬಿಜೆಪಿ ಮುಖಂಡರನ್ನು, ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಈ ಪ್ರಕರಣದ ಜವಾಬ್ದಾರಿ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.




Leave a Reply

Your email address will not be published. Required fields are marked *

error: Content is protected !!