ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿಗಳ ಮುತ್ತಿಗೆ: ವಿಜಯೇಂದ್ರ

54

ಪ್ರಜಾಸ್ತ್ರ ಸುದ್ದಿ

ನವದೆಹಲಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಜೂನ್ 28ರಂದು ರಾಜ್ಯದಲ್ಲಿ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

ಬುಧವಾರ ಮಾಧ್ಯಮದವರೊಂದಿಗೆ ನವದೆಹಲಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟ ಹಣ ದುರ್ಬಳಕೆಯಾಗಿದೆ. ಈ ಮೂಲಕ ಸರ್ಕಾರ ಹಣ ಲೂಟಿ ಮಾಡಿದೆ. ಆತುರಆತುರಾಗಿ ಎಸ್ಐಟಿ ರಚನೆ ಮಾಡಿ ತಮಗೆ ಬೇಕಾದಂತೆ ತನಿಖೆ ಮಾಡಿಸುತ್ತಿದೆ ಎಂದು ಆರೋಪಿಸಿದರು.

ಈ ಹಣವನ್ನು ಲೋಕಸಭಾ ಚುನಾವಣೆಯಲ್ಲಿ ತೆಲಂಗಾಣದ ಬೇನಾಮಿ ಖಾತೆಗೆ ವರ್ಗಾಯಿಸಲಾಗಿದೆ. ಹಿಂದೆ ಇದೇ ರೀತಿ ಎಸಿಬಿ ಮೂಲಕ ಮುಚ್ಚಿ ಹಾಕಿದರು. ಇದನ್ನು ನಾವು ಇಲ್ಲಿಗೆ ಬಿಡುವುದಿಲ್ಲ. ಹೋರಾಟ ಮಾಡುತ್ತೇವೆ ಎಂದರು.




Leave a Reply

Your email address will not be published. Required fields are marked *

error: Content is protected !!