ವಾಲ್ಮೀಕಿ ನಿಗಮ ಹಗರಣ: ಕೇಂದ್ರ ಗೃಹ ಸಚಿವರಿಗೆ ಯತ್ನಾಳ ಪತ್ರ

94

ಪ್ರಜಾಸ್ತ್ರ ಸುದ್ದಿ

ವಿಜಯಪುರ: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ ಸಂಬಂಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದಾರೆ.

ಶನಿವಾರ ಪತ್ರ ಬರೆದಿರುವ ಅವರು, ಪ್ರಕರಣದಲ್ಲಿ ನಿಷ್ಪಕ್ಷಪಾತ ತನಿಖೆ ನಡೆಯಲಿ. ಈ ಬಗ್ಗೆ ಯೂನಿಯನ್ ಬ್ಯಾಂಕ್ ಅಧಿಕಾರಿಗಳು ಸಿಬಿಐಗೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಅಕ್ರಮಕ್ಕೆ ಸಹರಿಸುವಂತೆ ಹೇಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

2019ರಲ್ಲಿ ಸಚಿವರಾಗಿದ್ದ ಜಿ.ಪರಮೇಶ್ವರ್ ಆಪ್ತ ಸಹಾಯಕ ಬೆಂಗಳೂರು ವಿವಿ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. 2016ರಲ್ಲಿ ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೇ 30ರಂದು ದಾವಣಗೆರೆಯಲ್ಲಿ ಪಿ.ಎಸ್ ಗೌಡರ ಅನ್ನೋ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ವಾಲ್ಮೀಕಿ ನಿಗಮದ ಹಣ ವರ್ಗಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಯೂನಿಯನ್ ಬ್ಯಾಂಕ್ ಈಗಾಗ್ಲೇ ಘೋಷಿಸಿದೆ. ಈ ಬಗ್ಗೆ ಆದಷ್ಟು ಸಿಬಿಐ ತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆ ಹಚ್ಚಿ, ರಾಜ್ಯ ಪರಿಶಿಷ್ಟ ಪಂಗಡದ ಜನರಿಗೆ ಕೊಡಿಸಬೇಕು ಎಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!