ಸಪ್ತಪದಿ ತುಳಿದ ಬಿಟೌನ್ ಬ್ಯೂಟಿ ಯಾಮಿ..

606

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬಾಲಿವುಡ್ ನಟಿ ಯಾಮಿ ಗೌತಮ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಬಗ್ಗೆ ಸ್ವತ ನಟಿ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನಿರ್ದೇಶಕ ಆದಿತ್ಯ ಧಾರ್ ಅವರ ಜೊತೆ ಮದುವೆಯಾಗಿರುವುದಾಗಿ ತಿಳಿಸಿದ್ದಾಳೆ.

ಸದಾ ವಿಭಿನ್ನ ಪಾತ್ರಗಳ ಮೂಲಕ ನಟಿ ಯಾಮಿ ಬಾಲಿವುಡ್ ನಲ್ಲಿ ಗುರುತಿಸಿಕೊಂಡಿದ್ದಾರೆ. ಇನ್ನು ಆದಿತ್ಯ ಧಾರ್, ಭಾರತೀಯ ಸೈನಿಕರ ಮೇಲೆ ನಡೆದ ದಾಳಿಯ ಉರಿ ಚಿತ್ರ ಸೇರಿದಂತೆ ಹಲವು ಸಿನಿಮಾಗಳನ್ನ ನಿರ್ದೇಶನ ಮಾಡಿದ್ದಾರೆ. ದಿ ಇಮ್ಮಾರ್ಟಲ್ ಅಶ್ವತ್ಥಾಮ ಅನ್ನೋ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಅತ್ತ ನಟಿ ಯಾಮಿ ಭೂತ್ ಪೊಲೀಸ್ ಚಿತ್ರದಲ್ಲಿ ನಟಿಸಲು ಸಜ್ಜಾಗ್ತಿದ್ದಾರೆ.




error: Content is protected !!