ಪ್ರಜಾಸ್ತ್ರ ಸುದ್ದಿ
ಕೋಲಾರ: ಕಳೆದ ಒಂದು ತಿಂಗಳು ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹಿತ, ಆಫೀಸ್ ನಿಂದ ಬಂದವನೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೋಲಾರದ ಅರಾಭಿಕೊತ್ತನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹರೀಶ್(28) ಮೃತ ದುರ್ದೈವಿ.
ಕೆಲಸ ಮುಗಿಸಿಕೊಂಡು ಬೆಳಗಿನ ಜಾವ ಮನೆಗೆ ಬಂದಿದ್ದಾನೆ. ಬಂದವನೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಯಾವ ಕಾರಣಕ್ಕೆ ಹೋಗಿ ಮಾಡಿಕೊಂಡಿದ್ದಾನೆ ಅನ್ನೋದು ತಿಳಿದು ಬಂದಿಲ್ಲ. ಒಂದು ತಿಂಗಳ ಹಿಂದೆ ದೇವನಹಳ್ಳಿ ಮೂಲದ ಯುವತಿಯನ್ನು ಮದುವೆಯಾಗಿದ್ದ. ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.