ಪ್ರಜಾಸ್ತ್ರ ಸುದ್ದಿ
ಕೊಪ್ಪಳ(Koppala): ಇಬ್ಬರು ಮಹಿಳೆಯರ ಮೇಲೆ ಇತ್ತೀಚೆಗೆ ನಡೆದ ಅತ್ಯಾಚಾರ ಪ್ರಕರಣ ಸಂಬಂಧ 3ನೇ ಆರೋಪಿಯನ್ನು ಬಂಧಿಸಲಾಗಿದೆ. ತಮಿಳುನಾಡಿನಲ್ಲಿ ಆರೋಪಿ ಶರಣಬಸವ ಎಂಬಾತನನ್ನು ಬಂಧಿಸಲಾಗಿದೆ ಎಂದು ಎಸ್ಪಿ ರಾಮ್.ಎ ಅರಸಿದ್ದಿ ಅವರು ಸೋಮವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು. ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇತ್ತೀಚೆಗೆ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ನಡೆದಿತ್ತು.
ಬಂಧಿತರು ಗಂಗಾವತಿಯ ಸಾಯಿ ನಗರದ ನಿವಾಸಿಗಳಾಗಿದ್ದಾರೆ. ಘಟನೆ ನಡೆದ ಮರುದಿನವೇ ಚೇತನ್ ಸಾಯಿ, ಮಲ್ಲೇಶ ಹಂದಿ ಎನ್ನುವ ಆರೋಪಿಗಳನ್ನು ಬಂಧಿಸಿದ್ದರು. ಇದೀಗ ಶರಣಬಸವ ಎಂಬಾತನ ಬಂಧನವಾಗಿದೆ. ಕೃತ್ಯ ನಡೆಸಿರುವುದನ್ನು ಆರೋಪಿ ಒಪ್ಪಿಕೊಂಡಿದ್ದಾನೆ. ಬೈಕ್ ಜಪ್ತಿ ಮಾಡಲಾಗಿದೆ. ಇವರೆಲ್ಲ ಗಾರೆ ಕೆಲಸ ಮಾಡುತ್ತಿದ್ದರು. ಘಟನೆ ನಡೆದ ದಿನ ಮದ್ಯ ಸೇವನೆ ಮಾಡಿರುವುದು ತಿಳಿದು ಬಂದಿದೆ ಎಸ್ಪಿ ಹೇಳಿದ್ದಾರೆ. ಆನೆಗೊಂದಿ, ಸಾಣಾಪುರ ಸೇರಿ ಸುತ್ತಮುತ್ತ ಅಕ್ರಮ ಮದ್ಯ, ಮಾದಕ ವಸ್ತುಗಳ ಮಾರಾಟ ನಡೆಯುತ್ತಿರುವ ಮಾಹಿತಿ ಸಿಕ್ಕಿದ್ದು, ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ ಎಂದಿದ್ದಾರೆ.