ಪ್ರಜಾಸ್ತ್ರ ಸುದ್ದಿ
ಚೆನ್ನೈ(Chennai): ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಆರಂಭಿಕ ಹಿನ್ನಡೆ ಅನುಭವಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ಇದೀಗ ತಂಡದ ನಾಯಕ ಋತುರಾಜ್ ಗಾಯಕವಾಡ್ ಗಾಯದೊಂದ ಹೊರಗೆ ಉಳಿದಿದ್ದಾರೆ. ಸಿಎಸ್ಕೆ ತಂಡದ ಕೋಚ್ ಸ್ಟೀಪನ್ ಫ್ಲೇಮಿಂಗ್ ಈ ಬಗ್ಗೆ ತಿಳಿಸಿದ್ದಾರೆ. ಹಿರಿಯ ಆಟಗಾರ, ಮಾಜಿ ನಾಯಕ ಎಂ.ಎಸ್ ಧೋನಿಗೆ ನಾಯಕತ್ವ ವಹಿಸಲಾಗಿದೆ.
ಗಾಯಕವಾಡಗೆ ಮೊಣಕೈ ಗಾಯದಿಂದ ಬಳಲುತ್ತಿದ್ದು, ಮುಂದಿನ ಪಂದ್ಯಗಳಿಂದ ಹೊರಗುಳಿಯುತ್ತಿದ್ದಾರೆ. ಮೊದಲ ಬಾರಿಗೆ ಐಪಿಎಲ್ ನಲ್ಲಿ ನಾಯಕತ್ವ ಸ್ಥಾನ ಅಲಂಕರಿಸಿದ್ದರು. ಆದರೆ, ಆಡಿರುವ ಐದು ಪಂದ್ಯಗಳಲ್ಲಿ 4ರಲ್ಲಿ ಸೋಲು ಕಂಡಿದೆ. ಶುಕ್ರವಾರ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆಯುವ ಪಂದ್ಯದಲ್ಲಿ ಧೋನಿ ನಾಯಕತ್ವದಲ್ಲಿ ತಂಡ ಕಣಕ್ಕೆ ಇಳಿಯಲಿದೆ.