ಪ್ರಜಾಸ್ತ್ರ ಸುದ್ದಿ
ಬೆಂಗಳೂರು(Bengaloru): ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ, ಇವರ ಪುತ್ರ ಚೇತನಗೌಡ ಹಾಗೂ ಬ್ರಿಜೇಶ್ ಕಾಳಪ್ಪ ಮರಳಿ ಕಾಂಗ್ರೆಸ್(Congress) ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಭಾನುವಾರ ನಗರದಲ್ಲಿರುವ ಕೆಪಿಸಿಸಿ(KPCC) ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾದರು. ಶಿವರಾಮೇಗೌಡ ಅವರು ಜೆಡಿಎಸ್ ನಲ್ಲಿದ್ದರು. ಬ್ರಿಜೇಶ್ ಕಾಳಪ್ಪ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಪ್ ಪಕ್ಷಕ್ಕೆ ಸೇರಿದ್ದರು. ಈಗ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದಾರೆ. ಇವರೊಂದಿಗೆ ಇವರ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟು ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ, ಅವರ ಪುತ್ರ ಎಲ್.ಎಸ್.ಚೇತನಗೌಡ ಹಾಗೂ ಅವರ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆಯಾದರು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.